ಜೂನ್ 1ರ ರಾತ್ರಿ ವ್ಯಕ್ತಿಯ ಬರ್ಬರ ಹತ್ಯೆ ನಡೆದುಹೋಗಿತ್ತು. ಮೈಮೇಲೆ ಬಟ್ಟೆಗಳು ಸಹ ಇಲ್ಲದ ಸ್ಥಿತಿಯಲ್ಲಿ ಶವ ಪತ್ತೆ ಆಗಿತ್ತು. ಮೃತ ದೇಹದ ಗುರುತು ಹಚ್ಚುವುದೇ ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು. ಶವದ ಆಸುಪಾಸಿನಲ್ಲಿ ಪರಿಶೀಲನೆ ನಡೆಸಿದಾಗ ಮೃತ ವ್ಯಕ್ತಿಯ ಐಡಿ ಪತ್ತೆ ಆಗಿತ್ತು. ಬಳಿಕ ಮೃತ ವ್ಯಕ್ತಿ ಬೆಂಗಳೂರಿನಲ್ಲಿ ಜಿಯೋ ಕಂಪನಿ ಉದ್ಯೋಗಿ, ಬಾಗಲಕೋಟೆಯ ಇಳಕಲ್ ಮೂಲದ ಬಸವರಾಜ ಎಂಬುವುದು ಗೊತ್ತಾಗಿತ್ತು.ಬಸವರಾಜನಿಗೆ ಕುಡಿಯುವ ಚಟವಿತ್ತು ಎಂಬಂಶ ತಿಳಿದಾಗಲೇ ಪೊಲೀಸರಿಗೆ ಕೊಲೆ ಮೂಲ ಹುಡುಕಲು ಸುಳಿವು ಸಿಕ್ಕಿತ್ತು. ಬೆಂಗಳೂರಿನಿಂದ ಹೊರಟಿದ್ದ ಬಸವರಾಜ್ ಬಸ್ ನಿಲ್ಲಿಸಿದ ಊರುಗಳಲ್ಲಿ ಇಳಿದು ಬಾರ್ಗೆ
ತೆರಳಿ ಕುಡಿದಿದ್ದಾರೆ.ಮದ್ಯ ಕೊಡಿಸು ಎಂದು ಗಲಾಟೆ ತೆಗೆದಿದ್ದಾರೆ. ಹಣಕ್ಕಾಗಿ ಬೇಡಿಕೆಯಿಟ್ಟು ಗಲಾಟೆ ಮಾಡಿದ್ದಲ್ಲದೇ ಬಟ್ಟೆಯನ್ನು ಹರಿದು ಹಾಕಿದ್ದು, ಈ ವೇಳೆ ಕೆಳಗೆ ಬಿದ್ದ ಬಸವರಾಜ್ ತಲೆ ಮೇಲೆ ಇಟ್ಟಿಗೆ ಹಾಕಿ ಹತ್ಯೆ ಮಾಡಿದ್ದಾರೆ. ಕೋಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿದ ಖಾಕಿ ಪಡೆ ಜೈಲಿಗಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

