ನಿರೀಕ್ಷೆಗೂ ಮೀರಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಟ್ರೋಫಿ ವಿಜೇತ ತಮ್ಮ ಫೇವರಿಟ್ ತಂಡದ ಸದಸ್ಯರನ್ನು ನೋಡಲು ಆಗಮಿಸಿದ್ದರು. ಚಿನ್ನಸ್ವಾಮಿ ಸ್ಟೇಡಿಯಂನ ಬಳಿ ಭಾರೀ ಕಾಲ್ತುಳಿತ ಸಂಭವಿಸಿದ್ದು, ಇಲ್ಲಿಯವರೆಗೂ 11 ಮಂದಿ ಸಾವು ಕಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ವೈದೇಹಿ ಆಸ್ಪತ್ರೆಯಲ್ಲಿ 4 ಮಂದಿ ಹಾಗೂ ಬೌರಿಂಗ್ ಆಸ್ಪತ್ರೆಯಲ್ಲಿ 7 ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ.ಘಟನೆಯಲ್ಲಿ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಅಪಾರ ಪ್ರಮಾಣದ ಅಭಿಮಾನಿಗಳು ಸೇರಿದ್ದರು. 5 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಆದರೆ, ಅಭಿಮಾನಿಗಳನ್ನು ನಿಯಂತ್ರಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದಿದ್ದಾರೆ.ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಬೌರಿಂಗ್ ಆಸ್ಪತ್ರೆಗೆ ಆಗಮಿಸಿದ್ದು, ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

