ಐಪಿಎಲ್ ಕ್ರಿಕೆಟ್ ಗೆದ್ದ RCB ತಂಡಕ್ಕೆ ವಿಧಾನಸೌಧದಲ್ಲಿ ಇನ್ನು ಕೆಲವೇ ಕ್ಷಣಗಳಲ್ಲಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಕಾರಿನಲ್ಲಿ RCB ಬಾವುಟವನ್ನು ಹಿಡಿದುಕೊಂಡು ವಿಜಯೋತ್ಸವ ಆಚರಿಸಿದರು. RCB ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂಭ್ರಮದ ವಾತಾವರಣ ಇದೆ. 18 ವರ್ಷಗಳ ಬಳಿಕ RCB ಗೆಲುವು ಸಾಧಿಸಿದೆ. ಹೀಗಾಗಿ ಸರ್ಕಾರದ ವತಿಯಿಂದ ಅಭಿನಂದನಾ ಸಮಾವೇಶ ನಡೆಯಲಿದೆ. ಇನ್ನು ಭದ್ರತಾ ದೃಷ್ಟಿಯಿಂದ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದ ವರೆಗೆ ವಿಕ್ಟರಿ ಪರೇಡ್ ನಡೆಸಲು ಅವಕಾಶ ನೀಡಿಲ್ಲ.ಬದಲಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆಯನ್ನು ಮಾಡಲು ಅವಕಾಶ ನೀಡಲಾಗಿದೆ.ಇನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವದ ಹಿನ್ನೆಲೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಹೀಗಾಗಿ ಕ್ರೀಡಾಂಗಣದಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

