ಬೆಂಗಳೂರಿನ ರಸ್ತೆಗಳಲ್ಲಿ ಸಂಭ್ರಮಾಚರಣೆ ಜೋರಾಗುತ್ತಿರುವ ಬೆನ್ನಲ್ಲೇ ಭಾರೀ ದುರಂತ ಸಂಭವಿಸಿತ್ತು. ಆರ್ಸಿಬಿಯ ಚೊಚ್ಚಲ ಕಪ್ನ ಸಂಭ್ರಮಾಚರಣೆಯ ಸಂದರ್ಭದಲ್ಲಿ ಭಾರೀ ದುರಂತ ಸಂಭವಿಸಿದ್ದು 8ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾಲ್ತುಳಿತ ದುರಂತದಲ್ಲಿ ಗಾಯಗೊಂಡಿರುವವರ ಸಂಖ್ಯೆ ಹೆಚ್ಚಾಗಿದೆ. ದುರಂತದ ಬಗ್ಗೆ ಮಾತನಾಡಿರುವ ಐಪಿಎಲ್ನ ಚೇರ್ಮನ್ ಅರುಣ್ ಧುಮಾಲ್ ಅವರು, ಆರ್ಸಿಬಿಯ ಸಂಭ್ರಮಾಚರಣೆಗೆ ನಾವು ಯಾವುದೇ ಅನುಮತಿಯನ್ನು ನೀಡಿರಲಿಲ್ಲ. ಅಲ್ಲದೇ ಎಲ್ಲಾ ಆಟಗಾರರು ಅವರ ತವರಿಗೆ ಹೋಗಲಿದ್ದಾರೆ ಎಂದು ಹೇಳಿದ್ದರು. ಆರ್ಸಿಬಿ ಮ್ಯಾನೇಜ್ಮೆಂಟ್ನೊಂದಿಗೆ ಮಾತನಾಡಿ ಕಾರ್ಯಕ್ರವನ್ನು ರದ್ದುಪಡಿಸುವುದಕ್ಕೆ ಸೂಚನೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

