Breaking News

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿನ 31 ಆರೋಪಿಗಳ ಗಡಿಪಾರು..!!

ವಯಸ್ಸಿದೆ ಅಂತ ದಾದಾಗಿರಿ ಮಾಡಿದ್ರೆ ಗಡಿಪಾರು ಗ್ಯಾರಂಟಿ ಅಂದ ಮಾತು ಸತ್ಯ ಆಯ್ತು!!

ರಿಲ್ಸ್ ಮಾಡ್ರಿ ಅಂತ ಪೋಜ್ ಕೊಡ್ತಿದ್ದ ದಾವೂದ ಮೈಸೂರಿಗೆ

ಮೂರನೆ ಲಿಸ್ಟ್ ರೇಡಿ ಆಗ್ತಿದೆ…

ಸೈಲೆಂಟ್ ಆಗಿ ಮನೆಗೆ ಮಗ ಆಗಿ ಇದ್ರೆ ಇರ್ತಾರೆ ಇಲ್ಲಂದ್ರ ಗಡಿಪಾರು…!!!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಾಲ್ವರ ಮೇಲೆ ಗೂಂಡಾ ಕಾಯ್ದೆ ಹಾಗೂ 31 ಆರೋಪಿತರನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು. ನಗರದಲ್ಲಿಂದು

ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಾಗರ ಲಕ್ಕುಂಡಿ, ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ದಾವೂದ್ ನದಾಫ ಹಾಗೂ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮಣ ಗಭ್ಯಾ ಎಂಬುವರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೊಳಿಸಲಾಗಿದೆ‌ ಎಂದು ಮಾಹಿತಿ ನೀಡಿದರು. ಮೂರನೇ ಹಂತದಲ್ಲಿ ಇನ್ನಷ್ಟು ಜನರ ಗಡಿಪಾರು ಮಾಡಲಾಗುವುದು ಎಂದು ತಿಳಿಸಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *