ಗಂಗೊಳ್ಳಿ ಮತ್ತು ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆಯತ್ನ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಧೀರ್ ಕೆಲಸ ಮುಗಿಸಿಕೊಂಡು ಇಡೂರು ಕುಂಜ್ಞಾಡಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಸ್ಸಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದು, ಈ ವೇಳೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿಕೊಂಡಿದ್ದ ಕಾರ್ತಿಕ್, ವಿಷ್ಣು ಹಾಗೂ ರಕ್ಷಿತ್ ಎಂಬವರು ಸುಧೀರ್ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಕೆನ್ನೆಗೆ ಹೊಡೆದು, ಕುತ್ತಿಗೆಯನ್ನು ಒತ್ತಿ ಹಿಡಿದು ಕೊಲ್ಲಲು ಪ್ರಯತ್ನಿಸಿರು ವುದಾಗಿ ದೂರಲಾಗಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

