ಮುಂಬೈನಲ್ಲಿ ಹಳೆ ದ್ವೇಷಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳು 45 ವರ್ಷದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಹಲವು ಬಾರಿ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ. ಭಾನುವಾರ ರಾತ್ರಿ ಮುಂಬೈನ ಚೀತಾ ಕ್ಯಾಂಪ್ ಪ್ರದೇಶದಲ್ಲಿ ನಡೆದ ಈ ಘಟನೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ತಕ್ಷಣವೇ ಅವರ ಕುಟುಂಬದವರು ಸಿಯಾನ್ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಅವರು ಪ್ರಾಣಾಪಾಯ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

