ಚಿಕ್ಕಸ್ವಾಮಿ, ಪತ್ನಿ ರೂಪ ಮತ್ತು ಚನ್ನಮಲ್ಲಮ್ಮ ಎಂಬುವವರು ಬೈಕ್ ವೇಳೆ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಮತ್ತು ಇಬ್ಬರು ಮಹಿಳೆಯರ ಮೇಲೆ ಲಾರಿಯ ಚಕ್ರ ಹರಿದಿದೆ. ಇದರ ಪರಿಣಾಮ ಸ್ಥಳದಲ್ಲಿಯೇ ಮೂವರು ಅಸುನೀಗಿದ್ದಾರೆ ಎನ್ನಲಾಗಿದೆ.ವಿಷಯ ತಿಳಿದು ಸ್ಥಳಕ್ಕೆ ಡಿವೈಎಸ್ಪಿ ರಘು, ಪಿಎಸ್‌ಐ ಚೇತನ್ ಕುಮಾರ್, ಅಪರಾಧ ವಿಭಾಗದ ರಸೂಲ್ ಪಾಗವಾಲೆ, ಎಸ್ ಐ ಶಿವಣ್ಣ, ದೊಡ್ಡಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಮಿಳುನಾಡು ಮೂಲದ ಲಾರಿಯಾಗಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

