ಜಮಗೋಡ ರೈಲ್ವೆ ಸ್ಟೇಷನ್ ಕ್ರಾಸ್ ಹತ್ತಿರ ರಸ್ತೆ ಬದಿಯಲ್ಲಿ ಮಲಗಿದ್ದ ಎರಡು ಆಕಳುಗಳನ್ನು ಕಳ್ಳತನ ಮಾಡಿಕೊಂಡು ಕಾರಿನ ಹಿಂಬದಿ ಸೀಟಿನಲ್ಲಿ ಹಿಂಸಾತ್ಮಕವಾಗಿ ತುಂಬಿಕೊಂಡು ಹೋಗುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಆರೋಪಿತರ ಬೆನ್ನಟ್ಟಿದ್ದಾರೆ.ರಸ್ತೆಯ ಫ್ಲೈಓವರ್‌ನ ಕೆಳಗೆ ಆರೋಪಿತರನ್ನು ಕಾರು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆರೋಪಿತರು ವಿವಿಧ ಪೊಲೀಸ್ ಠಾಣೆಯ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಲಾಗಿದ್ದು, ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಎಸ್‌ಪಿ ಶ್ಲಾಘಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

