ಮಗಳು ತನ್ನ ತಂದೆಯ ಜೊತೆ ಉಳಿದುಕೊಂಡಿದ್ದು, ಅಪರೂಪಕ್ಕೆ ತಾಯಿ ಬಳಿ ಬರುತ್ತಿದ್ದಳು.ಈ ವೇಳೆ ತಾಯಿ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತನಿಂದ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಮಾಡಿಸಿದ್ದಾಳೆ ಎನ್ನಲಾಗಿದೆ. ಜನವರಿಯಿಂದ ಮಾರ್ಚ್‌ವರೆಗೆ ಹರಿದ್ವಾರ, ಬೃಂದಾವನ ಮತ್ತು ಆಗ್ರಾದಲ್ಲಿ ಹಲವು ಬಾರಿ ಅತ್ಯಾಚಾರ ನಡೆಸಲಾಗಿದೆ ಎಂದು ಮನನೊಂದ ಮಗಳು ತನ್ನ ತಂದೆ ಬಳಿ ಹೇಳಿಕೊಂಡಿದ್ದಾಳೆ.ಕೂಡಲೇ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಸದ್ಯ ತಾಯಿ ಆಕೆಯ ಪ್ರಿಯಕರ ಸುಮಿತ್ ಪತ್ವಾಲ್ ಮತ್ತು ಆತನ ಸ್ನೇಹಿತ ಶುಭಂನನ್ನ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

