Breaking News

ಕೆರೆಗೆ ಬಿದ್ದಿದ್ದ ಜಿಂಕೆ, ಗ್ರಾಮಸ್ಥರಿಂದ ರಕ್ಷಣೆ…

ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಮರ್ಕಲ್ ಗ್ರಾಮದಲ್ಲಿ ಕೆರೆಗೆ ಬಿದ್ದು ಮೇಲೆ ಏಳಲಾಗದೆ ಸಮಸ್ಯೆ ಎದುರಿಸುತ್ತಿದ್ದ ಜಿಂಕೆ ಮರಿಯನ್ನು ಗ್ರಾಮಸ್ಥರು ರಕ್ಷಿಸಿ ಮಾನವೀಯತೆ ಮೆರೆದಿದ್ದಾರೆ.ಗ್ರಾಮದ ಪ್ರಶಾಂತ್, ಜೈಪಾಲ್, ಶಶಿ, ಸವಿನ್ ಹಾಗೂ ಹಾಲಪ್ಪ ಎಂಬುವರು ಕೆರೆಗೆ ಇಳಿದು ಜಿಂಕೆಗೆ ಹಗ್ಗ ಕಟ್ಟಿ ನಾಯಿಗಳನ್ನು ಓಡಿಸಿ ಜಿಂಕೆಯನ್ನು ಮೇಲೆ ಎಳೆದು ರಕ್ಷಿಸಿದರು.ಜಿಂಕೆಗೆ ಆಹಾರ ನೀಡಿ ಸಂತೈಸಿ, ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಜಿಂಕೆಯನ್ನು ಕಾಡಿಗೆ ಬಿಡುವಂತೆ ಅರಣ್ಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *