Breaking News

ಬೆಂಗಳೂರು ಹೊಸ ಕಮಿಷನರ್ ಸೀಮಂತ ಕುಮಾರ್!!

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಹೊಣೆಯಾಗಿಸಿ ಕಮಿಷನರ್ ಬಿ ದಯಾನಂದ ಅವರನ್ನು ಅಮಾನತು ಮಾಡಿದ ಬೆನ್ನಲ್ಲೇ ಸರ್ಕಾರ ಹೊಸ ಆಯುಕ್ತರನ್ನಾಗಿ ಹಿರಿಯ ಅಧಿಕಾರಿ ಸೀಮಂತ ಕುಮಾರ್ ಅವರನ್ನು ನೇಮಿಸಿದೆ.ಬ್ಯಾಟನ್ ಪಡೆಯದೇ ಸೀಮಂತ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಸೀಮಂತ ಕುಮಾರ್ ಕೂಡಾ ದಕ್ಷ ಅಧಿಕಾರಿಯೇ. ಬಿಹಾರ ಮೂಲದವರಾದ ಸೀಮಂತ ಕುಮಾರ್ 1970 ರಲ್ಲಿ ಜನಿಸಿದ್ದು 1996 ರ ಬ್ಯಾಚ್ ನ ಐಪಿಎಸ್ ಅಧಿಕಾರಿ.ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವಿ. ಕಮಿಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿ, ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ, ಕೇಂದ್ರ ವಲಯ, ಮಂಗಳೂರು ವಲಯದ ಐಜಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *