ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನ RCB ಅಭಿಮಾನಿಗಳು ಬಲಿಯಾಗಿರುವ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ನರಸಿಂಹರಾಜು ಎಂಬ ಹೆಡ್ ಕಾನ್ಸ್ ಟೇಬಲ್, ಸರ್ಕಾರದ ಆದೇಶ ಖಂಡಿಸಿ ಕೈಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಫೋಟೋ ಹಿಡಿದು, ಕಪ್ಪುಪಟ್ಟಿ ಧರಿಸಿ ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕಾಗಮಿಸಿದ ವಿಧಾನಸೌಧ ಪೊಲೀಸರು, ಹೆಡ್ ಕಾನ್ಸ್ ಟೇಬಲ್ ಅವರನ್ನು ವಶಕ್ಕೆ ಪಡೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

