ವಿದ್ಯಾರ್ಥಿನಿ ದೈಹಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದ ಹಿನ್ನಲೆಯಲ್ಲಿ ಮನನೊಂದು 20 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಹಿಮಾಚಲ ಪ್ರದೇಶದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಮಂಡಿ ಜಿಲ್ಲೆಯ ಸುಂದರ್ ನಗರದ ಜವಹರಲಾಲ್ ನೆಹರೂ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಅರ್ಪಿತ್ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದೆ.ʼʼಹಲವು ಸಮಯಗಳಿಂದ ಮಗನ ಬೆನ್ನು ಬಿದ್ದಿರುವ ಅದೇ ಕಾಲೇಜಿನ ಲಾವಣ್ಯಾ ದೈಹಿಕ ಸಂಪರ್ಕ ಬೆಳೆಸುವಂತೆ ಪೀಡಿಸುತ್ತಿದ್ದಳು ಎಂದು ಅರ್ಪಿತ್‌ನ ತಾಯಿ ದೂರು ನೀಡಿದ್ದಾರೆ. ಅದರ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಈಗಾಗಲೇ ಆಕೆಯನ್ನು ವಶಕ್ಕೆ ಪಡೆಯಲಾಗಿದೆʼʼ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

