ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ 9 ಗಂಟೆಗೆ ಸುಮಾರಿಗೆ ನಡೆದಿದೆ. ಗೊಲ್ಲಹಳ್ಳಿ ಗ್ರಾಮದ ದರ್ಶನ್ (25) ಕೊಲೆಯಾದವರು. ಗೊಲ್ಲಹಳ್ಳಿ ಗ್ರಾಮದ ವೇಣುಗೋಪಾಲ್ ಎಂಬಾತ ಕೃತ್ಯ ಎಸಗಿರುವ ಶಂಕೆಯಿದ್ದು, ಆತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.ಪ್ರೇಮದ ವಿಚಾರಕ್ಕೆ ಕೊಲೆ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

