Breaking News

ಮಕ್ಕಳಿದ್ದ ಆಟೋವನ್ನು ನ್ಯೂಟ್ರಲ್‌ ಮಾಡಿ ಹಿಂದಕ್ಕೆ ತಳ್ಳಿದ ಬೈಕ್‌ ಸವಾರ…

ಅಂಗಡಿಯಲ್ಲಿ ದಿನಸಿ ಖರೀದಿಸಲು ಚಾಲಕ ಆಟೋವನ್ನು ರಸ್ತೆ ಬದಿ ನಿಲ್ಲಿಸಿ ತೆರಳಿದ್ದರು. ರಸ್ತೆ ಬದಿಯ ಪಾರ್ಕಿಂಗ್ ಸ್ಥಳದಲ್ಲಿ ಯುವಕ ಬೈಕ್ ನಿಲ್ಲಿಸಿದ್ದನು. ಬೈಕ್​ ಹಿಂದೆ ಆಟೋ ಪಾರ್ಕ್​ ಮಾಡಲಾಗಿತ್ತು. ಇದರಿಂದ ಬೈಕ್ ತೆಗೆಯಲಾಗದೆ ಯುವಕ ಪರದಾಡಿದ್ದಾನೆ. ಆಗ, ಸಿಟ್ಟಿನಿಂದ ಯುವಕ ಆಟೋ ಬಳಿ ಹೋಗಿ ಮಕ್ಕಳಿರುವುದು ನೋಡಿಯೂ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿದ್ದಾನೆ. ಆಟೋ ವೇಗವಾಗಿ ಹಿಂದೆ ಚಲಿಸುವುದನ್ನು ಕಂಡು ಸ್ಥಳದಲ್ಲಿದ್ದವರು ಕೂಗಾಡಿದ್ದಾರೆ. ಕೂಡಳೇ ಸ್ಥಳಕ್ಕೆ ಓಡಿ ಬಂದ ಚಾಲಕ ಆಟೋ ನಿಲ್ಲಿಸಿದ್ದಾನೆ.ಪೊಲೀಸರು ಯುವಕನನ್ನು ಕರೆಸಿ ಎಚ್ಚರಿಕೆ ನೀಡಿದ್ದಾರೆ. ವಾಹನ ಸವಾರರು ವಾಹನ ಪಾರ್ಕಿಂಗ್ ವೇಳೆ ನಿಯಮ ಪಾಲನೆ ಮಾಡುವಂತೆಯೂ ಎಚ್ಚರಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *