Breaking News

ಪತ್ನಿಯ ತಲೆ ಕತ್ತರಿಸಿ ರುಂಡದ ಸಮೇತ ಪೊಲೀಸ್ ಠಾಣೆಗೆ ಬಂದ ಪತಿ!

ಕೋರಮಂಗಲದ ಕಂಪೆನಿಯೊಂದರಲ್ಲಿ ಆರೋಪಿ ಶಂಕರ್ ಕೆಲಸ ಮಾಡಿಕೊಂಡಿದ್ದ. ಕೊಲೆಯಾದ ಮಹಿಳೆ ಮಾನಸಾ ಕೂಡ ಬೇರೊಂದು ಕಂಪೆನಿಗೆ ಕೆಲಸಕ್ಕೆ ಹೋಗುತ್ತಿದ್ದಳು. ಅಲ್ಲಿಯೇ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದಳೆಂದು ಶಂಕಿಸಿ ಆರೋಪಿ ಶಂಕರ್, ಮಾರಕಾಸ್ತ್ರದಿಂದ ಆಕೆಯ ಕುತ್ತಿಗೆ ಕತ್ತರಿಸಿ ಕೊಲೆ ಮಾಡಿದ್ದಾನೆ. ಬಳಿಕ ತಲೆಯನ್ನು ಕವರ್‌ ನಲ್ಲಿ ತುಂಬಿಕೊಂಡು, ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರದ ಸಮೇತ ಪೊಲೀಸ್ ಠಾಣೆಗೆ ಬಂದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಬಳಿಕ ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮೋಹನ್ ಕುಮಾರ್, ಪಿಐ ಸಂದೀಪ್ ಮಹಜನ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾದ ಪ್ರಿಯಕರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *