ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ವತಿಯಿಂದ ಇಲ್ಲಿಯ ಜೆ.ಸಿ. ನಗರದ ಅಕ್ಕನ ಬಳಗದ ಸಭಾಂಗಣದಲ್ಲಿ ಏರ್ಪಡಿಸಿದ್ದ ರೈಲ್ವೆ ಸುರಕ್ಷತೆ ರಾಜ್ಯ ಮಟ್ಟದ ಸಾರ್ವಜನಿಕ ಸಮಾವೇಶದಲ್ಲಿ ಅವರು ಮಾತನಾಡಿದರು. ಭಾರತದ ರೈಲ್ವೆ ಇಲಾಖೆಯನ್ನು ಖಾಸಗೀಕರಣ ಮಾಡಲಾಗಿದೆ.ಪ್ರಯಾಣಿಕರು ಹಾಗೂ ನೌಕರರಲ್ಲಿಯೂ ಅಸುರಕ್ಷತೆ ಭಾವ ಮನೆ ಮಾಡಿದೆ ಎಂದು ಸಿಐಟಿಯು ಅಖಿಲ ಭಾರತ ಅಧ್ಯಕ್ಷೆ ಡಾ.ಕೆ. ಹೇಮಲತಾ ಅಭಿಪ್ರಾಯಪಟ್ಟರು. ಪ್ರತಿ ವರ್ಷವೂ ರೈಲ್ವೆ ಅಪಘಾತ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇದೇ ವಿಷಯ ಇಟ್ಟುಕೊಂಡು ಜನರಲ್ಲಿ ಜಾಗೃತಿ, ಸಾರ್ವಜನಿಕ ಅಭಿಪ್ರಾಯ ಸಂಗ್ರಹ, ಸಿಬ್ಬಂದಿಗೆ ಸುರಕ್ಷತೆ ಒದಗಿಸಲು ಸಮಾವೇಶ ನಡೆಸಲಾಗುತ್ತಿದೆ ಎಂದರು.ಸಿಐಟಿಯು ಕರ್ನಾಟಕ ಉಪಾಧ್ಯಕ್ಷ ವಿಜೆಕೆ ನಾಯರ್, ಕೆ. ಮಹಾಂತೇಶ, ಎಐಎಲ್‌ಆರ್‌ಎಸ್‌ಎ ಪ್ರಧಾನ ಕಾರ್ಯದರ್ಶಿ ಕೆ.ಸಿ. ಜೇಮ್ಸ್, ಎಐಜಿಸಿ ಕಾರ್ಯದರ್ಶಿ ಎ.ಕೆ. ದುಭೆ, ಎ.ವಿ. ಕಾಂತರಾಜು, ಬಿ.ಐ. ಈಳಿಗೇರ, ಮಹೇಶ ಪತ್ತಾರ, ಗುರುಸಿದ್ದಪ್ಪ ಅಂಬಿಗೇರ, ಕಸಾಪ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ ಇತರರು ಇದ್ದರು
bigtvnews | Hubli Dharwad News | Kannada News | Karnataka News Hubli News | News In Hubli | Local news

