ಬೆಂಗಳೂರು ನಗರದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾಗಿರುವ ಡೆಲ್ಲಿ ಪಬ್ಲಿಕ್ ಸ್ಕೂಲ್‌ಗೆ ಸೇರಿದ ಬಸ್ ಅಪಘಾತಕ್ಕೊಳಗಾಗಿದ್ದು, 20ಕ್ಕೂ ಹೆಚ್ಚಿನ ಶಾಲಾ ಮಕ್ಕಳು ಅದರೊಳಗೆ ಪ್ರಯಾಣಿಸುತ್ತಿದ್ದರು. ಬೆಳಗ್ಗೆ ಶಾಲೆಗೆ ಕರೆಯ್ಯುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಬಸ್‌ನಲ್ಲಿ ಕೆಲ ಮಕ್ಕಳು ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲ ಮಕ್ಕಳು ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜೊತೆಗೆ, ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.ಘಟನೆಯ ಮಾಹಿತಿಯೊಂದಿಗೆ ಮಾದನಾಯಕನಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗತ್ಯ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

