ಚೆನ್ನೈ-ಬೆಂಗಳೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಕಾರಿನಲ್ಲಿದ್ದ ತಮಿಳರಸನ್, ನಾಗರಾಜು ಎಂಬವರಿಗೆ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ರಾಜಾಸ್ಥಾನ ಮೂಲದ ಅಶೋಕ್ (28) ಮತ್ತು ಮೋಹನ್ ಲಾಲ್(32) ಮೃತಪಟ್ಟವರು. ಇವರು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

