Breaking News

ಮೈಸೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ-ಮಗಳ ಶವ ಪತ್ತೆ!!

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಎಂಬ ಗ್ರಾಮದಲ್ಲಿ ತಾಯಿ ಮಗಳ ಶವ ಪತ್ತೆಯಾಗಿದೆ. ಪತಿ ಜಯರಾಮು ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿದ್ದು, ಪತಿ ಜಯರಾಮು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗುತ್ತಿದೆ. ಪತಿ ಜಯರಾಮು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಹಾಗಾಗಿ ಪತ್ನಿ ಮಹಾದೇವಮ್ಮ ಪತಿ ವಿರುದ್ಧ ಹಲವು ಬಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಶವಗಳು ಪತ್ತೆಯಾಗಿವೆ. ಘಟನೆ ಕುರಿತಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *