Breaking News

ಮಂಡ್ಯ: ಹೋಟೆಲ್‌ನಲ್ಲಿ ನಾಯಿ ಮಾಂಸದ ಆರೋಪ!!

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿರುವ ಮದೀನಾ ಎಂಬ ಚಿಕ್ಕ ಹೋಟೆಲ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಈ ಹೋಟೆಲ್‌ನಲ್ಲಿ ನಾನ್-ವೆಜ್ ಅಡುಗೆಯಲ್ಲಿ ನಾಯಿ ಮಾಂಸವನ್ನು ಬೆರೆಸಿ ಗ್ರಾಹಕರಿಗೆ ಬಡಿಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಗ್ರಾಹಕರು ತಿಂದ ಬಿರಿಯಾನಿಯಲ್ಲಿ ಮಾಂಸದ ರುಚಿಯಲ್ಲಿ ವ್ಯತ್ಯಾಸ ಕಂಡು ಶಂಕೆ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಜನರು ಆಕ್ರೋಶಗೊಂಡಿದ್ದಾರೆ.ಘಟನೆಯ ಸುದ್ದಿ ತಿಳಿದು ಪಾಂಡವಪುರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಆರೋಪಿ ಆಜಾದ್‌ನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಈಗ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *