ಆರೋಪಿಯ ಮೊಬೈಲನ್ನು ಸುನಿಲ್ ತೆಗೆದುಕೊಂಡಿದ್ದು ಮತ್ತೆ ವಾಪಸ್ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಅನೇಕ ಬಾರಿ ಜಗಳವಾಗಿತ್ತು ಎನ್ನಲಾಗಿದೆ. ರಾತ್ರಿ ಮಲಗಿದ್ದಾಗ ಸುನಿಲ್ ತಲೆಯ ಮೇಲೆ ರಮೇಶ್ ದೊಡ್ಡ ಸೈಜು ಕಲ್ಲು ಎತ್ತಿ ಹಾಕಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ತೀವ್ರವಾಗಿ ಗಾಯಗೊಂಡಿದ್ದ ಸುನಿಲ್‌ನನ್ನು ಬಟ್ಲಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿತ್ತು. ಮಂಗಳವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಆರೋಪಿ ರಮೇಶ್ ಪರಾರಿಯಾಗಿದ್ದಾನೆ. ಬಟ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

