ಹೆದ್ದಾರಿಯು ಗುಂಡಿಮಯವಾಗಿದೆ. ಗುಂಡಿ ತಪ್ಪಿಸುವ ಭರದಲ್ಲಿ ಬೈಕ್ ಸವಾರರಿಬ್ಬರೂ ಹೆದ್ದಾರಿಗೆ ಬಿದ್ದಿದ್ದರು. ಹಿಂಬದಿ ಸವಾರ ಅಶ್ರಫ್ ಮೇಲೆ ಬುಲೆಟ್ ಟ್ಯಾಂಕರ್ ನ ಹಿಂಬದಿ ಚಕ್ರ ಹರಿದಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಹೆದ್ದಾರಿಯನ್ನು ಮಳೆಗಾಲಕ್ಕೆ ಮುನ್ನ ಪೂರ್ಣ ಪ್ರಮಾಣದಲ್ಲಿ ದುರಸ್ತಿಗೊಳಿಸಿ, ಇಂತಹ ದಾರುಣ ಸಾವುಗಳಿಗೆ ಕಡಿವಾಣ ಹಾಕಿ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಒತ್ತಾಯಿಸಿತ್ತು. ಈ ಬೇಡಿಕೆ ಮುಂದಿಟ್ಟು, ಶಾಸಕರು, ಸಂಸದರನ್ನು ಒತ್ತಾಯಿಸಿ ಕೂಳೂರಿನಲ್ಲಿ ಧರಣಿ ನಡೆಸಿದ್ದಕ್ಕೆ ನಮ್ಮ ಮೇಲೆ ಎಫ್‌ಐಆರ್ ದಾಖಲಿಸಲಾಯಿತು.ಮೃತರನ್ನು ಸುರತ್ಕಲ್ ಜನತಾ ಕಾಲೊನಿ ನಿವಾಸಿ ಮಹಮ್ಮದ್ ಅಶ್ರಫ್ ( 45) ಎಂದು ಗುರುತಿಸಲಾಗಿದೆ. ಬೈಕ್ ಚಲಾಯಿಸುತ್ತಿದ್ದ ಕೊಳ್ನಾಡಿನ ಮೊಹಮ್ಮದ್ ಷರೀಫ್ (40) ಅವರೂ ಗಾಯಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

