ಮೆಟ್ರೋ ಟಿಕೆಟ್ ಏರಿಕೆ ಆದ ಮೇಲೆ ಮೆಟ್ರೋದಲ್ಲಿ ಪ್ರಯಾಣ ಮಾಡುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದ್ದು, ಇದರಿಂದ ಮೆಟ್ರೋಗೆ ನಷ್ಟ ಉಂಟಾಗುತ್ತಿದೆ ಎನ್ನಲಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಲು ಬಿಎಂಆರ್ಸಿಎಲ್ ಜಾಹೀರಾತುಗಳ ಮೊರೆ ಹೋಗಿದ್ದು, ಮೆಟ್ರೋ ಒಳಗೆ ಮತ್ತು ಹೊರಗೆ ಬಣ್ಣ ಬಣ್ಣದ ಜಾಹೀರಾತುಗಳು ಕಾಣಿಸುತ್ತಿವೆ. ಆರ್ಥಿಕ ಹೊಡೆತದಿಂದ ಹೊರಬರಲು ಮೆಟ್ರೋ ಮುಂದಿರುವ ಆಯ್ಕೆ ಸದ್ಯ ಜಾಹೀರಾತು ಎಂಬಂತಾಗಿದೆ.ಪ್ರತಿ ವರ್ಷ 5% ಹೆಚ್ಚಳ ಮಾಡಲಾಗುತ್ತದೆ. ಸಾಮಾಜಿಕ ಕಳಕಳಿ ಇರುವ ಜಾಹೀರಾತು ಹಾಕಲು ಮಾತ್ರ ಅವಕಾಶ ನೀಡಲಾಗಿದೆ. ಆದರೆ ಇದಕ್ಕೆ ಮೆಟ್ರೋ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಒಟ್ಟಿನಲ್ಲಿ ನಮ್ಮ ಮೆಟ್ರೋ ಏನೋ ಆದಾಯ ಸಾಲುತ್ತಿಲ್ಲ. ಮಾಡಿರುವ ಸಾಲಕ್ಕೆ ಬಡ್ಡಿಕಟ್ಟಲು ಆಗುತ್ತಿಲ್ಲ, ಅದಕ್ಕೆ ಜಾಹೀರಾತು ಮೊರೆ ಹೋಗಿದ್ದೀವಿ ಎನ್ನುತ್ತಿದ್ದು, ಇತ್ತ ಪ್ರಯಾಣಿಕರು ಮಾತ್ರ ಟಿಕೆಟ್ ದರ ಕಡಿಮೆ ಮಾಡಿ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುತ್ತದೆ, ಆದಾಯೂ ಬರುತ್ತದೆ ಎನ್ನುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

