Breaking News

ಜನಾರ್ದನ ರೆಡ್ಡಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್!!

ಬಳ್ಳಾರಿ :ಅಕ್ರಮ ಗಣಿಗಾರಿಕೆ ಹಾಗೂ ಗಡಿ ಒತ್ತುವರಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಚಿವ ಹಾಗೂ ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ಮೂಲಕ ಜನಾರ್ಧನ ರೆಡ್ಡಿ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದ್ದು, ಅವರ ಶಾಸಕರ ಸ್ಥಾನ ಸದ್ಯಕ್ಕೆ ಉಳಿಯುವ ಸಾಧ್ಯತೆಯಿದೆ.ಜನಾರ್ದನ ರೆಡ್ಡಿ ಮತ್ತೊಮ್ಮೆ ರಾಜಕೀಯ ವೇದಿಕೆಯಲ್ಲಿ ಬಲವಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಆದರೆ ಈ ತೀರ್ಪು ಕೇವಲ ತಾತ್ಕಾಲಿಕ ತಡೆಯಾಜ್ಞೆಯಾಗಿದ್ದು, ಮುಂದಿನ ದಿನಗಳಲ್ಲಿ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ತೀರ್ಪು ನಿರ್ಣಾಯಕವಾಗಲಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಲವು ವರ್ಷಗಳ ಕಾಲ ನ್ಯಾಯಾಂಗ ಪ್ರಕ್ರಿಯೆ ನಡೆದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *