ಚಾಕುವಿನಿಂದ ಇರಿದು ಮಹಿಳಾ ಅಧಿಕಾರಿ ಹತ್ಯೆಗೆ ಯತ್ನಿಸಲಾಗಿದ್ದು, ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಟಿಪ್ಪು ಸುಲ್ತಾನ ವೃತ್ತದಲ್ಲಿ ಈ ಒಂದು ಘಟನೆ ನಡೆದಿದೆ. ಚಾಕುವಿನಿಂದ ಇರಿದು ರೇಣುಕಾ ಸಾಯಬಣ್ಣ ಕನ್ನೊಳ್ಳಿ (30) ಎನ್ನುವ ಮಹಿಳಾ ಅಧಿಕಾರಿಯ ಹತ್ಯೆಗೆ ಯತ್ನಿಸಲಾಗಿದೆ. ರೇಣುಕಾ ಕನ್ನೊಳ್ಳಿ ಇಂಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿದ್ದಾರೆ.ರೇಣುಕಾ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಆರೋಪಿ ಸಂಜು ಬನಸೋಡೆ ಎಂಬಾತ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ ಹಲ್ಲೆಗೆ ಒಳಗಾದಂತಹ ರೇಣುಕಾ ಇಂಡಿ ತಾಲೂಕಿನ ಕೋಟ್ನಾಳ ನಿವಾಸಿ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ರೇಣುಕಾ ಅವರನ್ನು ತಕ್ಷಣ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ರೇಣುಕಾ ಸಾವನ್ನಪ್ಪಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

