ಬಾಲಕಿ ‘ನನ್ನನ್ನು ಬಿಟ್ಟು ಬಿಡಿ, ನಿಮ್ಮ ಕಾಲಿಗೆ ಬೀಳುತ್ತೇನೆ. ನನಗೆ ಈ ಮದುವೆ ಬೇಡ. ನನಗೆ ದೇವರೇ ಗತಿ, ಕಾಪಾಡು ದೇವರೇ, ಎಲ್ಲಿದ್ದೀಯಪ್ಪಾ ದೇವ್ರೆ” ಎಂದು ಅಂಗಲಾಚುತ್ತಿದ್ದರೂ . ಮದುವೆ ಮಾಡಬೇಕೆಂದು ಪಟ್ಟು ಹಿಡಿದಿರುವ ಪೋಷಕರು, ಬಾಲಕಿಯನ್ನು ಹೊಡೆದು ಬಡಿದು ಎಳೆದಾಡುತ್ತಿರುವುದು ಘಟನೆ ಮನಕಲಕುವಂತಿದೆ.ಘಟನೆ ವೇಳೆ ಗ್ರಾಮಸ್ಥರು ಮಧ್ಯಪ್ರವೇಶಿಸಿದ್ದರೂ, ಕುಟುಂಬದವರು ತಡೆದು ವಿವಾಹಕ್ಕೆ ಯತ್ನಿಸಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಚಿತ್ರದುರ್ಗ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಸಿ ಸವಿತಾ ಅವರು ಈ ವಿಷಯದ ಬಗ್ಗೆ ಮಾತನಾಡಿ, ನಾವು ತಕ್ಷಣ ಸ್ಥಳಕ್ಕೆ ಧಾವಿಸಿ ಮಗುವನ್ನು ರಕ್ಷಿಸಿದ್ದೇವೆ. ಆಕೆ ಈಗ ಬಾಲ ಮಂದಿರದಲ್ಲಿದ್ದಾಳೆ. ಮಕ್ಕಳ ಕಲ್ಯಾಣ ಸಮಿತಿ ಹುಡುಗಿಯೊಂದಿಗೆ ಮಾತನಾಡುತ್ತದೆ. ಸಲಹೆಗಾರರು ಆಕೆಗೆ ಸಮಾಧಾನ ಹೇಳುತ್ತಾರೆ. ಹುಡುಗಿಯ ಹೇಳಿಕೆ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಆಕೆ ತನ್ನ ಗ್ರಾಮಕ್ಕೆ ಹಿಂತಿರುಗಿ ತನ್ನ ಹೆತ್ತವರೊಂದಿಗೆ ಇರಲು ಒಪ್ಪಿದರೆ, ನಾವು ಆಕೆಯನ್ನು ಕಳುಹಿಸುತ್ತೇವೆ. ಇಲ್ಲದಿದ್ದರೆ, ಆಕೆ ಬಾಲ ಮಂದಿರದಲ್ಲಿಯೇ ಇದ್ದು, ಅಲ್ಲಿಂದಲೇ ಶಾಲೆಗೆ ಹೋಗುತ್ತಾಳೆಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

