Breaking News

ಚಲಿಸುವ ರೈಲಿಗೆ ಬಿದ್ದು 4 ಮಕ್ಕಳು ಜತೆ ತಂದೆ ಆತ್ಮಹತ್ಯೆ!

ಮನೋಜ್ ಮಹಾತೋ ತನ್ನ ಪತ್ನಿ ಪ್ರಿಯಾ ಜತೆ ಆಗಾಗ ಜಗಳವಾಡುತ್ತಿದ್ದರು. ಮೊನ್ನೆ ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ತಾರಕಕ್ಕೇರಿದೆ. ಇದರಿಂದ ಮನನೊಂದ ಮನೋಜ್​​, ಮಕ್ಕಳನ್ನು ಉದ್ಯಾನವನಕ್ಕೆ ಕರೆ ತಂದು ಸಂಜೆವರೆಗೆ ಆಟವಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.ಮಕ್ಕಳಿಗೆ ಅಪ್ಪ ಏನು ಮಾಡುತ್ತಿದ್ದಾನೆ ಎಂದು ಅರ್ಥವಾಗುತ್ತಿಲ್ಲ. ನಮಗೆ ಭಯವಾಗುತ್ತಿದೆ, ಅಪ್ಪಾ ನಮ್ಮನ್ನು ಬದುಕಲು ಬಿಡಿ ಎಂದು ಚಿರಾಡಿದ್ದಾರೆ. ಆದರೆ, ಮನೋಜ್​​ ಬರುವ ರೈಲಿನಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿಲ್ಲ. ಇತ್ತ ಲೋಕೋ ಪೈಲಟ್, ಹಾರ್ನ್ ಮಾಡಿ ರೈಲನ್ನು ನಿಲ್ಲಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ. ಕೊನೆಗೆ ರೈಲು ಐವರ ಮೇಲೆ ಹಾದು ಹೋಗಿದೆ.ಲೋಕೋ ಪೈಲಟ್ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದರು. ನಂತರ ಪೊಲೀಸರು ಬಂದು ಶವಗಳನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡರು. ಮನೋಜ್ ಜೇಬಿನಲ್ಲಿ ಆತ್ಮಹತ್ಯೆ ಪತ್ರ ಪತ್ತೆಯಾಗಿದ್ದು, ಅದರಲ್ಲಿ ತನ್ನ ಹೆಂಡತಿಯೇ ಆತ್ಮಹತ್ಯೆಗೆ ಕಾರಣ ಎಂದು ಬರೆದಿದ್ದಾನೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *