ಚಾಮರಾಜನಗರ ಜಿಲ್ಲೆಯ ಮೂಲತಃ ಕೊಳ್ಳೆಗಾಲ ತಾಲೂಕಿನ ಕಾಮಗೆರೆ ನಿವಾಸಿಗಳಾದ ಚಂದನ್ ಗೌಡ ಹಾಗೂ ಆಶಾ (19) ಇಬ್ಬರೂ ಪ್ರೇಮಿಗಳು ಕಳೆದ ಒಂದೂವರೆ ವರ್ಷದ ಹಿಂದೆ ಕುಟುಂಬದವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದರು.ಶುಕ್ರವಾರ ರಾತ್ರಿ ಮತ್ತೆ ಇಬ್ಬರ ನಡುವೆ ಜಗಳ ಉಂಟಾಗಿ ತೀವ್ರ ಸ್ವರೂಪ ಪಡೆದು ವೇಲ್ ನಿಂದ ತುಂಬು ಗರ್ಭಿಣಿ ಪತ್ನಿಯ ಕುತ್ತಿಗೆಗೆ ಬಿಗಿದು ಉಸಿರು ಕಟ್ಟಿಸಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೇಸ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಮದ್ದೂರು ಪೋಲೀಸರು ಸಿಪಿಐ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಪತಿ ಚಂದನ್ ಗೌಡ ನನ್ನು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆ ನಡೆಸಿದಾಗ ಯನ್ನು ತಾನೇ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ,ನಂತರ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

