Breaking News

ಕಲಬುರಗಿ :ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

ಕಲಬುರ್ಗಿ ಜಿಲ್ಲೆಯ ಆಳಂದ‌ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ತಡರಾತ್ರಿ ರೌಡಿಶೀಟರ್ ಬರ್ಬರ ಕೊಲೆಯಾಗಿದೆ. ಸುಧಾಕರ್‌ (32) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಮಂಗಳವಾರ ತಡರಾತ್ರಿ ಸಹೋದರನ ಜೊತೆ ಬೈಕ್ ಮೇಲೆ ತೆರಳುವಾಗ ದುಷ್ಕರ್ಮಿಗಳು ದಾಳಿ ನಡೆಸಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.ಈ ಘಟನೆಯಲ್ಲಿ ಸುಧಾಕರನ ಸಹೋದರನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಳೆ ವೈಶಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *