Breaking News

ಹಾಸನ :ಹಾರ್ಟ್​ ಅಟ್ಯಾಕ್‌ನಿಂದ ಯುವಕ ನಿಶಾಂತ್ ಸಾವು!

ಹೊಳೆನರಸೀಪುರ ಪಟ್ಟಣದ ನಿವಾಸಿಗಳಾದ ಚನ್ನಕೇಶವ ಮತ್ತು ಜ್ಯೋತಿ ದಂಪತಿಯ ಪುತ್ರ ನಿಶಾಂತ್ (19) ಬೆಂಗಳೂರಿನ ಜೆಪಿ ನಗರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಡಿಪ್ಲೋಮಾ ವ್ಯಾಸಂಗವನ್ನು ಮುಗಿಸಿದ್ದ ನಿಶಾಂತ್, ಕೈಗಾರಿಕಾ ತರಬೇತಿಗಾಗಿ 15 ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿ ಪಿಜಿಯಲ್ಲಿ ವಾಸವಾಗಿದ್ದರು. ಜೂನ್ 11ರಂದು ಬೆಳಗ್ಗೆ ತನ್ನ ಕೋಣೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.ಬೆಳಗ್ಗೆ 10 ಗಂಟೆಯಾದರೂ ನಿಶಾಂತ್ ಕೋಣೆಯ ಬಾಗಿಲನ್ನು ತೆರೆಯದ ಕಾರಣ, ಸ್ನೇಹಿತರು ಮತ್ತು ಅಕ್ಕಪಕ್ಕದವರು ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ಅವನು ಈಗಾಗಲೇ ಮೃತಪಟ್ಟಿರುವುದು ಗೊತ್ತಾಗಿದೆ

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *