ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಡಿಯಾಗಿದೆ. ಹುಬ್ಬಳ್ಳಿ-ಧಾರವಾಡದ ಪ್ರಮುಖ ರಸ್ತೆಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಕೆರೆಯಂತಾಗಿದೆ.ರೆಡ್ ಅಲರ್ಟ್ ಘೋಷಣೆ ಹಾಗೂ ಜಿಲ್ಲೆಯ ಬಹುತೇಕ ಕಡೆ ನಿನ್ನೆ ಸಂಜೆಯಿಂದಲೇ ನಿರಂತರ ಮತ್ತು ವ್ಯಾಪಕ ಮಳೆ ಆಗುತ್ತಿರುವುದರಿಂದ ಸುರಕ್ಷತೆ ದೃಷ್ಟಿಯಿಂದ ಧಾರವಾಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

