Breaking News

ಮಳೆಗೆ ಕುಸಿದು ಬಿದ್ದ ಮನೆ, ಕುಟುಂಬಸ್ಥರು ಪಾರು!

ಧಾರಾಕಾರ ಮಳೆಗೆ ಮನೆಗೆ ಗೋಡೆ ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದ ದವಸಧಾನ್ಯಗಳು, ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಯಾಗಿದ್ದು ನಷ್ಟ ಅನುಭವಿಸುವಂತಾಗಿದೆ. ಈ ಕೂಡಲೇ ಸರ್ಕಾರ ಮನೆ ಪರಿಹಾರ ನೀಡಬೇಕು ಎಂದು ಸಿದ್ದರಾಜು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಎಂ.ಪಿ ರಾಜಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *