Breaking News

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ!

ಕೆಎಸ್‌ಆರ್ ಟಿ ಸಿ ಬಸ್ ನಿಲ್ದಾಣದ ಸಮೀಪದ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು, ಆರೋಪಿ ಶಂಭುಲಿಂಗನನ್ನು ಬಂಧಿಸಿದ್ದಾರೆ.ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ತನ್ನ ಸ್ವಂತ ಲಾಭಕ್ಕಾಗಿ ಮದ್ಯ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಆರೋಪಿಯನ್ನು ಬಂಧಿಸಿ ಆತನಿಂದ ಒಟ್ಟು ರೂ. 2,600/- ಮೌಲ್ಯದ ವಿವಿಧ ಬ್ರ್ಯಾಂಡ್ ನ ಮದ್ಯದ ಸಾಚೇಟ್ ಮತ್ತು ನಗದು ರೂ. 3,960/-ನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *