ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹುಬ್ಬಳ್ಳಿನಗರ ತಾಲೂಕು ಅಯೋದ್ಯ ಗ್ರಾಮದ ನೇಕಾರನಗರ ಬ್ರಿಜ್ ಹತ್ತಿರ ಬೈಕಿನಲ್ಲಿ ರಸ್ತೆ ದಾಟುವಾಗ ಹುಸೇನಸಾಬ ಸಯ್ಯದಸಾಬ ಕಳಸ (58) ಅವರು ನೀರಿನ ರಭಸಕ್ಕೆ ಸಿಲುಕಿ ಕಣ್ಮರೆಯಾಗಿದ್ದಾರೆ. ಇವರೊಂದಿಗೆ ಬೈಕ್‍ನಲ್ಲಿದ್ದ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ. ತಹಶೀಲ್ದಾರ ಕಲ್ಲನಗೌಡ ಆರ್.ಪಾಟೀಲ ಅವರ ನೇತೃತ್ವದಲ್ಲಿ ತಾಲೂಕಾಡಳಿತವು ಕಣ್ಮರೆಯಾದ ವ್ಯಕ್ತಿಯ ಪತ್ತೆಗಾಗಿ ತೀವ್ರ ಕಾರ್ಯಾಚರಣೆ ಕೈಗೊಂಡಿದ್ದು, ತಪಾಸಣೆ ಕಾರ್ಯ ಮುಂದುವರೆದಿದೆ. ಹೆಚ್ಚಿನ ಕಾರ್ಯಾಚರಣೆ ಕೈಗೊಳ್ಳಲು ಬೆಳಗಾವಿಯಿಂದ ಇಂದು ಸಂಜೆ ಎಸ್‍ಡಿಆರ್‍ಎಫ್ ತಂಡ ಆಗಮಿಸಲಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.ನಿರಂತರ ಮಳೆಯಿಂದಾಗಿ ಜಿಲ್ಲೆಯ ನವಲಗುಂದದಲ್ಲಿ ಭಾಗಶಃ 23 ಮನೆ, ಅಣ್ಣಿಗೇರಿಯಲ್ಲಿ 15 ಮನೆ, ಹುಬ್ಬಳ್ಳಿ ನಗರದಲ್ಲಿ 3 ಮನೆ ಹಾಗೂ ಕುಂದಗೋಳದಲ್ಲಿ 2 ಮನೆಗಳು ಸೇರಿ ಒಟ್ಟು 45 ಮನೆಗಳು ಭಾಗಶಃ ಹಾನಿಗೊಳಗಾಗಿವೆ
bigtvnews | Hubli Dharwad News | Kannada News | Karnataka News Hubli News | News In Hubli | Local news

