Breaking News

ಲಾರಿ ಡಿಕ್ಕಿ, ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವು!!

ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್ ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದರೆ, 16 ಜನ5 ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ನಡೆದಿದೆ.ಓವರ್ ಟೇಕ್ ಮಾಡಲು ಹೋದಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.ನಿದ್ದೆಯ ಮಂಪರಿನಲ್ಲಿ ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಅಪಘಾತದಲ್ಲಿ ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ 1 ವರ್ಷದ ಮಗು ಸಾವನ್ನಪ್ಪಿದ್ದರೆ, 16 ಜನ ಗಾಯಗೊಂಡಿದ್ದಾರೆ.ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *