ಟ್ರಾಫಿಕ್‌ನಲ್ಲಿ ಹೆಚ್ಚಿನ ಸಮಯ ವ್ಯರ್ಥ ಮಾಡದೇ ಬೇಗನೆ ನಿಗದಿತ ಸ್ಥಳ ತಲುಪಬಹುದು. ಆದರೆ ಸೋಮವಾರದಿಂದ (ಜೂ.16) ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸಂಪೂರ್ಣ ಬ್ಯಾನ್ ಆಗುತ್ತಿದೆ. ಈಗಾಗಲೇ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿ ಬೈಕ್ ಟ್ಯಾಕ್ಸಿಗೆ ಅನುವು ಮಾಡಿಕೊಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇಷ್ಟೇ ಅಲ್ಲ ಆದೇಶವನ್ನು ಎತ್ತಿಹಿಡಿದಿದೆ.ಸರ್ಕಾರ ಬೈಕ್ ಟ್ಯಾಕ್ಸಿ ಕುರಿತು ಸ್ಪಷ್ಟ ಕಾನೂನು ರೂಪಿಸುವವರೆಗೆ ಬೈಕ್ ಟ್ಯಾಕ್ಸಿ ಬ್ಯಾನ್ ಇರಲಿದೆ ಎಂದು ವಿಭಾಗೀಯ ಪೀಠ ಹೇಳಿದೆ. ಬೈಕ್ ಟ್ಯಾಕ್ಸಿ ಕುರಿತು ಸ್ಪಷ್ಟ ನೀತಿ ನಿಮಮಗಳು ಜಾರಿಯಾಗುವ ವರೆಗೆ ಬ್ಯಾನ್ ಮುಂದುವರಿಯಲಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ. ಆದೇಶದಲ್ಲಿ ಸೋಮವಾರದಿಂದಲೇ (ಜೂ.16) ಕರ್ನಾಟಕದಲ್ಲಿ ಎಲ್ಲಾ ಬೈಕ್ ಟ್ಯಾಕ್ಸಿ ಬ್ಯಾನ್ ಎಂದು ಉಲ್ಲೇಖಿಸಿದೆ. ಹೀಗಾಗಿ ಸೋಮವಾರದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಇರುವುದಿಲ್ಲ ಎಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

