ಕಳೆದ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದ ಪ್ರಿನ್ಸಸ್ ಎಂಬ ವಿದೇಶಿ ಮಹಿಳೆ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದಳು.ರಾಜಾನುಕುಂಟೆ ಬಳಿ ವ್ಯಾಪಾರ ಮಾಡುವಾಗ ಸಿಕ್ಕಿಬಿದ್ದಿದ್ದಾಳೆ. ಬಂಧಿತ ಪ್ರಿನ್ಸಸ್ ನಿಂದ 10 ಕೋಟಿ ರೂ. ಮೌಲ್ಯದ 5.325 ಕೆಜಿ ಎಂಡಿಎಂಎ ಜಪ್ತಿ ಮಾಡಿದ್ದಾರೆ.ಆರಂಭದಲ್ಲಿ ನವದೆಹಲಿಯಲ್ಲಿ ವಾಸ ಮಾಡಿದ್ದಳು. ನಂತರ ತೆಲಂಗಾಣ ಯೂನಿವರ್ಸಿಟಿಯಲ್ಲಿ ವ್ಯಾಸಂಗ ಮಾಡುವುದಾಗಿ ಎಜುಕೇಷನ್ ವೀಸಾ ಪಡೆದಿದ್ದಳು. ಆದ್ರೆ, ಕಾಲೇಜಿಗೆ ದಾಖಲಾಗದೇ ಡ್ರಗ್ ಪೆಡ್ಲಿಂಗ್ ಗೆ ಇಳಿದಿದ್ದಳು. ದೆಹಲಿಯಿಂದ ಬೆಂಗಳೂರಿಗೆ ಬಸ್ ಮೂಲಕ ಡ್ರಗ್ ಸಾಗಾಟ ಮಾಡಿದ್ದು, ಚಿಕ್ಕಜಾಲ ಠಾಣಾ ವ್ಯಾಪ್ತಿಯ ರಾಜಾನುಕುಂಟೆ ಬಳಿ ವ್ಯಾಪಾರ ಮಾಡುವಾಗ ಸಿಕ್ಕಿಬಿದ್ದಿದ್ದಾಳೆ. ಈ ಸಂಬಂಧ ಚಿಕ್ಕಜಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ.
Check Also
ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ
ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …
bigtvnews | Hubli Dharwad News | Kannada News | Karnataka News Hubli News | News In Hubli | Local news

