ಮಳೆ ಹಾನಿ ವೀಕ್ಷಣೆಗೆ ಸಚಿವ ಸಂತೋಷ್ ಲಾಡ್ ಜೊತೆ ಹೆಚ್ಚುವರಿ ಡಿಸಿ ಗೀತಾ ತೆರಳಿದ್ದರು. ಹೆಚ್ಚುವರಿ ಡಿಸಿ ಗೀತಾ ಕಾರಿಗೆ ಸಿಲಿಂಡರ್ ತುಂಬಿದ್ದ ಕ್ಯಾಂಟರ್ ಡಿಕಿ ಹೊಡೆದಿದೆ. ಹುಬ್ಬಳ್ಳಿ ತಾಲೂಕಿನ ಹೆಬಸೂರು ಸಮೀಪ ಈ ಅಪಘಾತ ಸಂಭವಿಸಿದೆ.ಮಳೆ ಹಾನಿ ವೀಕ್ಷಿಸಿ ವಾಪಾಸ್ ಆಗುತ್ತಿದ್ದಾಗ ಹೆಬಸೂರು ಬಳಿ ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

