ಪಶ್ಚಿಮವಾಹಿನಿ ಬಳಿ ಶನಿವಾರ ಮುಂಜಾನೆ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರೈಲು ಹರಿದ ರಭಸಕ್ಕೆ ರುಂಡ ಮತ್ತು ಮುಂಡ ಬೇರ್ಪಟ್ಟಿವೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ತಾಲ್ಲೂಕಿನ ಅರಕೆರೆ ಗ್ರಾಮದ ಮಹದೇವು ಅವರ ಮಗ ಆಕಾಶ್ (24) ಮೃತರು.ಸ್ಥಳಕ್ಕೆ ಮೈಸೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

