Breaking News

ಗದಗ :ಅಶ್ಲೀಲ ಸಂದೇಶ ಕಳುಹಿಸಿದ ಮೂವರು ಬಾಲಕರನ್ನು ಕಂಬಕ್ಕೆ ಕಟ್ಟಿ ಥಳಿತ!

ಬಾಲಕಿಯೊಬ್ಬಳಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎಂದು ಆರೋಪಿಸಿ ಮೂವರು ಬಾಲಕರನ್ನು 55 ಮಂದಿಯಿದ್ದ ಗುಂಪೊಂದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನಲ್ಲಿ ನಡೆದಿದೆ.ಬಾಲಕರ ಪೋಷಕರು ಮತ್ತು ಸಂಬಂಧಿಕರು 55 ಗ್ರಾಮಸ್ಥರ ವಿರುದ್ಧ ದೌರ್ಜನ್ಯ ಪ್ರಕರಣ ದಾಖಲಿಸಿದ್ದರೆ, ಗ್ರಾಮಸ್ಥರು ಮೂವರು ಬಾಲಕರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಬಾಲಕರು ದಲಿತ ಸಮುದಾಯಕ್ಕೆ ಸೇರಿದವರು ಎಂದು ಹೇಳಲಾಗುತ್ತಿದ್ದು, ಜಾತಿ ಸಂಘರ್ಷ ಬೆದರಿಕೆ ಇರುವುದರಿಂದ ಗ್ರಾಮದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *