Breaking News

ಯುವಕನೋರ್ವನ ಮೇಲೆ ಕತ್ತಿ ಬೀಸಿ ಕೊಲೆಗೆ ಯತ್ನ, ಆರೋಪಿ ಬಂಧನ!

ರಿಕ್ಷಾ ಬ್ಯಾಟರಿಗಳನ್ನು ವಾಪಸ್‌ ತಂದು ಇಡುವಂತೆ ಹೇಳಿದ್ದಕ್ಕೆ ಆಕ್ರೋಶಗೊಂಡ ರೌಡಿಶೀಟರ್‌ ಓರ್ವ ರಿಕ್ಷಾ ಗಾಜು ಒಡೆದು ಯುವಕನೋರ್ವನ ಮೇಲೆ ಕತ್ತಿ ಬೀಸಿ ಕೊಲೆಗೆ ಯತ್ನಿಸಿ, ಮನೆ ಮಹಿಳೆಯರಿಗೆ ಅವಾಚ್ಯವಾಗಿ ನಿಂದಿಸಿ ಕೊಲೆಬೆದರಿಕೆ ಹಾಕಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಹೈದರ್‌ ಆಲಿ ರಸ್ತೆಯ ಮುಕ್ಕಚ್ಚೇರಿ ಎಂಎಫ್‌ಸಿ ಕ್ಲಬ್‌ ಹತ್ತಿರ ನಡೆದಿದೆ. ಹಮೀದ್‌ ಅವರ ಪುತ್ರ ಆದಿಲ್‌ ಅಹಮ್ಮದ್‌ ಎಂಬವರ ಮೇಲೆ ಕತ್ತಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದನು. ಈ ಕುರಿತು ಕಾರ್ಯಪ್ರವೃತ್ತರಾದ ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ನೇತೃತ್ವದ ಪೊಲೀಸರ ತಂಡ ಇಬ್ಬರನ್ನು ಬಂಧಿಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *