Breaking News

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕ್ಯಾಪ್ಟರ್ ಪತನ 7 ಜನ ಸಾವು!

ಹೆಲಿಕಾಪ್ಟರ್‌ ಮುಂಜಾನೆ 5 ಗಂಟೆಗೆ ಡೆಹ್ರಾಡೂನ್‌ನಿಂದ ಕೇದಾರನಾಥದತ್ತ ಹೊರಟಿತ್ತು. ಆದರೆ, ತ್ರಿಜುಗಿನಾರಾಯಣ ಮತ್ತು ಗೌರಿಕುಂಡ ನಡುವಿನ ಅರಣ್ಯ ಪ್ರದೇಶದಲ್ಲಿ ಅದು ನಾಪತ್ತೆಯಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಮಹಾನಿರ್ದೇಶಕ ಡಾ. ವಿ. ಮುರುಗೇಶನ್ ಮೊದಲಿಗೆ ಮಾಹಿತಿ ನೀಡಿದ್ದರು. ಅನಂತರ ರುದ್ರಪ್ರಯಾಗ ಜಿಲ್ಲೆಯ ಬಡಾಸು ಬಳಿ ಪತನಗೊಂಡಿರುವ ಅವಶೇಷಗಳು ಪತ್ತೆಯಾಗಿದ್ದು, ಐದು ಮೃತದೇಹಗಳನ್ನು ಹೊರತೆಗೆಯಲಾಗಿದೆ.ಮಾಹಿತಿ ಸಿಕ್ಕ ತಕ್ಷಣವೇ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಹಾಗೂ ಸ್ಥಳೀಯ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಪತ್ತೆಹಚ್ಚಿದ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ತಿಳಿಯಲು ತಜ್ಞರ ತಂಡದಿಂದ ತನಿಖೆ ನಡೆಯುತ್ತಿದೆ

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *