ಕ್ಷುಲ್ಲಕ ಕಾರಣಕ್ಕಾಗಿ ಎರಡೂ ಕೋಮಿನ ಗುಂಪುಗಳು ಪರಸ್ಪರ ಹೊಡೆದಾಡಿಕೊಂಡು ಗಲಾಟೆ ಮಾಡಿರುವ ಘಟನೆ ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ನಡೆದಿದೆ. ಅಂಗಡಿಗಳ ಪಾರ್ಕಿಂಗ್ ಜಾಗಕ್ಕಾಗಿ ಎರಡೂ ಕೋಮುಗಳ ಯುವಕರು ಪರಸ್ಪರ ಹೊಡೆದಾಡಿಕೊಂಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈಗ ಭಯಾನಕ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿದೆ.ಹುಬ್ಬಳ್ಳಿಯ ತಾರಿಹಾಳದಲ್ಲಿ ನಡೆದಿದ್ದ ಘಟನೆಯಲ್ಲಿ ತಂದೆ ಮಲ್ಲಿಕಾರ್ಜುನ ಯತ್ತಿನಮನೆ, ಮಗ ರವಿ ಯತ್ತಿನಮನೆ ಮೇಲೆ ಹಲ್ಲೆ ಮಾಡಿದ್ದಾರೆ. ಪಾರ್ಕಿಂಗ್ ವಿಚಾರಕ್ಕೆ ಜಗಳವಾಗಿದೆ. ಅಂಗಡಿಗೆ ನುಗ್ಗಿ ದಾಂದಲೆ ಮಾಡಿದ್ದು, ಅನ್ಯಕೋಮಿನ ಜನರಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಮುನ್ನಾ ಪಠಾಣ ಎಂಬಾತನೇ ತನ್ನ ಗುಂಪಿನೊಂದಿಗೆ ಬಂದು ಹಲ್ಲೆ ಮಾಡಿರುವುದಾಗಿ ಆರೋಪಿಸಿದ್ದಾರೆ.ಇನ್ನೂ ಘಟನೆ ನಡೆಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಏಳು ಜನರನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಗಲಾಟೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಇದು ಉದ್ದೇಶಪೂರ್ವಕವಾಗಿಯೇ ಹಲ್ಲೆ ಮಾಡಲಾಗಿದೆ ಎಂದು ಸಾರ್ವಜನಿಕರು ಘಟನೆಯ ಕುರಿತು ಗಂಭೀರವಾಗಿ ಆರೋಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

