Breaking News

ಪೊಲೀಸರಿಂದ ಹಲ್ಲೆಗೊಳಗಾಗಿದ್ದ ಭಾರತೀಯ ಮೂಲದ ವ್ಯಕ್ತಿ ಸಾವು!

ಕೆಲ ದಿನಗಳ ಹಿಂದೆ ಗೌರವ್ ಹಾಗೂ ಅವರ ಅಮೃತಪಾಲ್ ಕೌರ್ ಆಸ್ಟ್ರೇಲಿಯಾದ ಅಡಿಲೇಡ್‌ನ ಪೂರ್ವ ಉಪನಗರದಲ್ಲಿ ಸಾರ್ವಜನಿಕವಾಗಿ ರಸ್ತೆಯಲ್ಲಿ ಜಗಳವಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಪೊಲೀಸರು ಗೌರವ್ ಕುಂಡಿಯನ್ನು ಬಂಧಿಸಲು ಮುಂದಾಗಿದ್ದು, ಬಲವಂತವಾಗಿ ರಸ್ತೆಗೆ ತಳ್ಳಿದ್ದಾರೆ. ಈ ವೇಳೆ ಗೌರವ್ ತಮ್ಮದೇನು ತಪ್ಪಿಲ್ಲ ಬಂಧಿಸಬೇಡಿ ಎಂದು ಬೇಡಿಕೊಂಡಿದ್ದಾರೆ.ಪೊಲೀಸ್‌ ಅಧಿಕಾರಿಯೊಬ್ಬರು ಮೊಣಕಾಲಿನಿಂದ ಗೌರವ್ ಕುತ್ತಿಗೆಗೆ ಬಲವಾಗಿ ಹೊಡೆದಿದ್ದಾರೆ. ಪೊಲೀಸರ ಈ ಹೊಡೆತಕ್ಕೆ ಗೌರವ್ ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗೌರವ್ ಅದಾಗಲೇ ಕೋಮ ಸ್ಥಿತಿಗೆ ತಲುಪಿದ್ದರು. ಕೆಲ ದಿನಗಳ ಕಾಲ ಕೋಮಾದಲ್ಲಿ ಸಾವು ಬದುಕಿನ ಮಧ್ಯೆ ಹೋರಾಡಿದ್ದ ಗೌರವ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *