ಕರಿಬಸಪ್ಪ ಮತ್ತು ಮಗಳು ಊಟ ಮಾಡಿ ಮನೆಯಲ್ಲಿ ಮಲಗಿದ್ದ ವೇಳೆ ನಡು ರಾತ್ರಿ ಕುಮಾರ್ ಎಂಬ ಆರೋಪಿ ಮನೆಗೆ ನುಗ್ಗಿ ಕತ್ತಿಯಿಂದ ಕರಿಬಸಪ್ಪ ನಿಗೆ ಹಲ್ಲೆ ನಡೆಸಿದ್ದಾನೆ ಈ ವೇಳೆ ಎಚ್ಚರಗೊಂಡ ಮಗಳು ಜೋರಾಗಿ ಕಿರುಚಿಕೊಂಡಿದ್ದಾಳೆ ಇದರಿಂದ ಎಚ್ಚರಗೊಂಡ ಅಕ್ಕಪಕ್ಕದ ಮನೆಯವರು ಬಂದು ನೋಡಿದಾಗ ಹಲ್ಲೆಯಾಗಿರುವುದು ಗೊತ್ತಾಗಿದೆ ಕೂಡಲೇ ವಿಚಾರವನ್ನು ವಿಶು ಶೆಟ್ಟಿ ಅಂಬಲಪಾಡಿ ಅವರಿಗೆ ತಿಳಿಸಿದ್ದು ಬಳಿಕ ಬಂದ ಅವರು ಹಲ್ಲೆಗೊಳಗಾದ ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದ್ದಾರೆ.ಪ್ರಕರಣದ ಬಗ್ಗೆ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು ಆರೋಪಿ ಕುಮಾರನನ್ನು ಬಂಧಿಸಿ ಹಲ್ಲೆ ಮಾಡಿದ ಕತ್ತಿಯನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

