ವಂಡ್ಸೆ ಕಡೆಯಿಂದ ಹೆಮ್ಮಾಡಿ ಕಡೆಗೆ ಹೋಗುತ್ತಿದ್ದ ಬೈಕ್ ಹೆಮ್ಮಾಡಿ ಕಡೆಯಿಂದ ವಂಡ್ಸೆ ಕಡೆಗೆ ಬರುತ್ತಿದ್ದ ಶ್ರೀದುರ್ಗಾಂಬಾ ಬಸ್‌ಗೆ ಎದುರಿನಿಂದ ಢಿಕ್ಕಿ ಹೊಡೆದ ಪರಿಣಾಮ ಸವಾರ ಬೈಕ್ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಶರತ್ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.ಢಿಕ್ಕಿಯ ತೀವ್ರತೆಗೆ ಬೈಕ್ ನಜ್ಜುಗುಜ್ಜಾಗಿದ್ದು, ಬೈಕ್ ರೇಡಿಯೇಟರ್ ಮೇಲೆ ಪೆಟ್ರೋಲ್ ಬಿದ್ದ ಕಾರಣ ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಭಾಗಶಃ ಸುಟ್ಟು ಹೋಗಿದೆ. ಸ್ಥಳಕ್ಕೆ ಶಂಕರನಾರಾಯಣ ಠಾಣೆಯ ವೃತ್ತನಿರೀಕ್ಷಕ ಜಯರಾಮ್ ಡಿ.ಗೌಡ, ಕುಂದಾಪುರ ಸಂಚಾರಿ ಠಾಣೆಯ ಪಿಎಸೈ ಪ್ರಸಾದ್ ಕುಮಾರ್ ಭೇಟಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

