ಬೆಳಗಾವಿ ತಾಲೂಕಿನ ಪಂತಬಾಳೇಕುಂದ್ರಿ ಗ್ರಾಮದಿಂದ ಸಿಬಿಟಿಗೆ ಬರುತ್ತಿದ್ದ ಬಸ್ನಲ್ಲಿ ಸೀಟ್‌ಗಾಗಿ ಜಗಳವಾಗಿದೆ.ಈ ವೇಳೆ ಯುವಕನಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಪಂತಬಾಳೆಕುಂದ್ರಿ ಗ್ರಾಮದ ಮಾಜ್ ಸನದಿ (20) ಚಾಕು ಇರಿತಕ್ಕೆ ಒಳಗಾದ ಯುವಕ.ಎದೆ ಭಾಗಕ್ಕೆ ಚಾಕು ಇರಿದು ಅಪರಿಚಿತ ಯುವಕರ ಗ್ಯಾಂಗ್ ಪರಾರಿಯಾಗಿದೆ. ಆತನನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

