Breaking News

ಬೆಂಗಳೂರ: ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು.!

ಬನಶಂಕರಿ 2ನೇ ಹಂತದ ಶ್ರೀನಿವಾಸನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಏಕಾಏಕಿ ಮರದ ಕೊಂಬೆ ಮುರಿದು ಬಿದ್ದಿದ್ದು, ಬೈಕ್ ಸವಾರ ಅಕ್ಷಯ್ (29) ಗಂಭೀರವಾಗಿ ಗಾಯಗೊಂಡಿದ್ದನು.ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅಕ್ಷಯ್ ಭಾನುವಾರ ತಂದೆ ಹುಟ್ಟುಹಬ್ಬದ ಹಿನ್ನೆಲೆ ಮಟನ್ ತೆಗೆದುಕೊಂಡು ಬರುವುದಕ್ಕೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಗಂಭೀರ ಗಾಯಗಳಾಗಿದ್ದ ಅಕ್ಷಯ್ ಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ತಲೆಚಿಪ್ಪು 17 ಚೂರುಗಳಾಗಿದೆ ಎಂದು ವೈದ್ಯರು ಹೇಳಿದ್ದರು.ಮರದ ಕೊಂಬೆ ಬಿದ್ದ ಹೊಡೆತಕ್ಕೆ ಬೈಕ್ ಸವಾರ ಬೈಕ್ ನಿಂದ ಕೆಳಗೆ ಬಿದ್ದಿದ್ದರು. ರಕ್ತದ ಮಡುವಲ್ಲಿ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *